
ಗದಗ ಪಟ್ಟಣದ ಹುಡ್ಕೋ ಕಾಲೋನಿಯ ಎರಡು ವರ್ಷದ ಮಗು ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಹುಡ್ಕೋ ಕಾಲೋನಿಯಲ್ಲಿ ವಾಸವಾಗಿರುವ ಕುಟುಂಬವೊಂದರ ಸದಸ್ಯರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಎಲ್ಲರನ್ನು ಕ್ವಾರಂಟೈನ್ ಮಾಡಲಾಗಿದೆ. ಕ್ವಾರಂಟೈನ್ ಅವಧಿಯಲ್ಲಿ ಪೋಷಕರು ಮೊಬೈಲ್ ಸ್ವಿಚ್ ಆಫ್ ಮಾಡಿದ್ದರೆನ್ನಲಾಗಿದೆ.
ಇದು ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆ ಆಗಿದೆ ಎನ್ನುವ ಕಾರಣಕ್ಕೆ ಮಗುವಿನ ಹೆಸರಿನಲ್ಲಿ ಎಚ್ಚರಿಕೆ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗಿದೆ.