
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ಇಲಾಖೆಗೆ ಪೂರಕವಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಲು ಸರ್ಕಾರ ಮುಂದಾಗಿದೆ.
ಆರಂಭಿಕ ಹಂತದಲ್ಲೇ 275 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ ಆರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ಜೆ.ಸಿ. ಮಾಧುಸ್ವಾಮಿ, ಎಲ್ಕೆಜಿ-ಯುಕೆಜಿ ಆರಂಭಿಸಲು ಅಗತ್ಯ ಮೂಲಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಡಿಎಡ್ ಆದವರಿಗೆ ಮಾಂಟೇಸ್ಸರಿ ತರಬೇತಿ ನೀಡಲಾಗುವುದು. ಶಿಕ್ಷಕರಿಗೆ 7500 ರೂ., ಆಯಾಗಳಿಗೆ 5000 ರೂ. ಗೌರವ ಸಂಭಾವನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.