ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನನಿಬಿಡ ಪ್ರದೇಶ ಚರ್ಚ್ ಸ್ಟ್ರೀಟ್ ನಲ್ಲಿ ಚಲನಚಿತ್ರಗಳ ಶೂಟಿಂಗ್ ಗೆ ನಿರ್ಬಂಧ ವಿಧಿಸಲಾಗಿದೆ.
ಇನ್ಮುಂದೆ ಚರ್ಚ್ ಸ್ಟ್ರೀಟ್ ನಲ್ಲಿ ಚಿತ್ರೀಕರಣಕ್ಕೆ ಅವಕಾಶವಿಲ್ಲ. ಪೊಲೀಸರಿಂದಲೂ ಅನುಮತಿ ಪಡೆಯುವಂತಿಲ್ಲ ಎಂದು ಬಿಬಿಎಂಪಿ ಮಹತ್ವದ ಆದೇಶ ಹೊರಡಿಸಿದೆ.
ಚರ್ಚ್ ಸ್ಟ್ರೀಟ್ ನಲ್ಲಿ ಜನರ ಆಕರ್ಷಣೆಯಾಗಿದೆ. ಕಳೆದ ಬಾನುವಾರ ಚರ್ಚ್ ಸ್ಟ್ರೀಟ್ ನಲ್ಲಿ ಸಿನಿಮಾ ಚಿತ್ರೀಕರಣ ಮಾಡುತ್ತಿರುವುದನ್ನು ಗಮನಿಸಿ ಬಿಬಿಎಂಪಿ ಈ ಆದೇಶ ಹೊರಡಿಸಿದೆ.
ಮಲಯಾಳಂ ಚಿತ್ರದ ಶೂಟಿಂಗ್ ನ್ನು ಚರ್ಚ್ ಸ್ಟ್ರೀಟ್ ನಲ್ಲಿ ಮಾಡಲಾಗಿತ್ತು, ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಯಾವುದೇ ಸೂಕ್ತ ಅನುಮತಿ ಪಡೆಯದೇ ಚಿತ್ರೀಕರಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಆದರೆ ಸಿನಿಮಾ ಚಿತ್ರೀಕರಣಕ್ಕೆನಾವು ಅನುಮತಿ ನೀಡಿಲ್ಲ. ಕರ್ನಾಟಕ್ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಪಡೆದಿರಬಹುದು ಎಂದು ಪೊಲೀಸರು ತಿಳಿಸಿದ್ದರು.
ಆದರೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂದಳಿ ಕೂಡ ತಾವು ಯಾವ ಅನುಮತಿ ನೀಡಿಲ್ಲ. ನಮಗೆ ಅನುಮತಿ ನೀಡಲು ಅಧಿಕರ ಇಲ್ಲ ಎಂದಿತ್ತು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಬಿಬಿಎಂಪಿ ಚರ್ಚ್ ಸ್ಟ್ರೀಟ್ ನಲ್ಲಿ ಸಿನಿಮ ಚಿತ್ರೀಕರಣ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದೆ.