alex Certify ಸಿಗರೇಟ್, ಗುಟ್ಕಾ, ಪಾನ್ ಮಸಾಲ, ತಂಬಾಕು ಉತ್ಪನ್ನಗಳ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಗರೇಟ್, ಗುಟ್ಕಾ, ಪಾನ್ ಮಸಾಲ, ತಂಬಾಕು ಉತ್ಪನ್ನಗಳ ನಿಷೇಧ

ಹಾಸನ: ಬೀಡಿ, ಸಿಗರೇಟು ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‍ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು.

ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್-19 ಹತೋಟಿಗೆ ಬರುವವರೆಗೂ ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಆರ್. ಗಿರೀಶ್ ಆದೇಶಿಸಿದ್ದಾರೆ.

ಒಂದು ವೇಳೆ ನಿಯಮ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯ್ದೆ 1897, ವಿಪತ್ತು ನಿರ್ವಹಣಾ ಕಾಯ್ದೆ-2005, ಐ.ಪಿ.ಸಿ-1960, ಸಿ.ಆರ್.ಪಿ.ಸಿ. ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ತಂಬಾಕು ಉತ್ಪನ್ನಗಳಾದ ಜರ್ದಾ, ಖೈನಿ, ಪಾನ್ ಮಸಾಲ ಇತ್ಯಾದಿ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ರೋಗವು ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು ಎಂಬ ಕಾರಣಕ್ಕೆ ಈ ಆದೇಶ ಹೊರಡಿಸಲಾಗಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...