
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಪರಿಹಾರ ಕಾರ್ಯಗಳ ಪ್ರಗತಿಪರಿಶೀಲನೆ ಮಾಡಲಿರುವ ಸಿಎಂ ಸಂತ್ರಸ್ತರಿಗೆ ನೆರವು ಘೋಷಿಸಲಿಲಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಸಿಎಂ ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿ ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆಗೆ ಮಳೆಹಾನಿ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ.
ಕಂದಾಯ ಸಚಿವ ಆರ್. ಅಶೋಕ ಅವರೂ ಮುಖ್ಯಮಂತ್ರಿಯವರೊಂದಿಗೆ ಪ್ರವಾಸ ಕೈಗೊಳ್ಳಲಿದ್ದು ಮೂರು ದಿನಗಳ ಕಾಲ ಜಿಲ್ಲಾವಾರು ಸಭೆ ನಡೆಸಲಿದ್ದಾರೆ.