alex Certify BREAKING: ರಾಜ್ಯ ಸರ್ಕಾರದಿಂದ 1250 ಕೋಟಿ ರೂ. ಮೌಲ್ಯದ ಬೃಹತ್ ಪ್ಯಾಕೇಜ್​ ಘೋಷಣೆ – ಯಾರಿಗೆಲ್ಲ ಸಿಗಲಿದೆ ಪರಿಹಾರ…? ಇಲ್ಲಿದೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯ ಸರ್ಕಾರದಿಂದ 1250 ಕೋಟಿ ರೂ. ಮೌಲ್ಯದ ಬೃಹತ್ ಪ್ಯಾಕೇಜ್​ ಘೋಷಣೆ – ಯಾರಿಗೆಲ್ಲ ಸಿಗಲಿದೆ ಪರಿಹಾರ…? ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮೇ 24ರವರೆಗೆ ಲಾಕ್​ಡೌನ್​ ನಿರ್ಬಂಧ ಹೇರಿದೆ. ಈ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಬೇಕು ಅಂತಾ ರಾಜ್ಯ ಸರ್ಕಾರ ಸಹಾಯ ಧನ ನೀಡುವ ನಿರ್ಧಾರಕ್ಕೆ ಬಂದಿದೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ 1250 ಕೋಟಿ ರೂಪಾಯಿ ಮೌಲ್ಯದ ವಿಶೇಷ ಪ್ಯಾಕೇಜ್​ ಘೋಷಿಸಿದ್ರು.

ಪ್ರತಿ ಹೆಕ್ಟೇರ್​ ಹೂವು ಹಾನಿಗೆ 10 ಸಾವಿರ ರೂಪಾಯಿ ಪರಿಹಾರ ಧನ ನೀಡಲಾಗುವುದು. ರಾಜ್ಯದ ರೈತರಿಗೆ 12.73 ಕೋಟಿ ರೂಪಾಯಿ ಮೌಲ್ಯದಲ್ಲಿ ನೆರವು ನೀಡಲಿದ್ದೇವೆ, ಆಟೋ, ಮ್ಯಾಕ್ಸಿ ಕ್ಯಾಬ್​ ಚಾಲಕರಿಗೆ 3 ಸಾವಿರ ರೂಪಾಯಿ ನೀಡಲಾಗುತ್ತದೆ.

ಅಸಂಘಟಿತ ಕಾರ್ಮಿಕರಿಗೆ 2 ಸಾವಿರ ರೂಪಾಯಿ ನೀಡಲಿದ್ದೇವೆ. ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ ರೂಪಾಯಿ ಪರಿಹಾರ ಸಿಗಲಿದೆ.ರಸ್ತೆ ಬದಿ ವ್ಯಾಪಾರಿಗಳಿಗೂ ತಲಾ 2 ಸಾವಿರ ರೂಪಾಯಿ ಪರಿಹಾರ ನೀಡಲಿದ್ದೇವೆ.

ಸಹಕಾರಿ ಸಂಘಗಳಿಂದ ಸಾಲ ಪಡೆದವರು ಕಂತು ಪಾವತಿಸುವ ಅವಧಿಯನ್ನ ಜುಲೈ 30ರವರೆಗೂ ರಾಜ್ಯ ಸರ್ಕಾರ ಮುಂದೂಡಿದೆ. ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಆಹಾರ ಸಿಗಲಿದೆ. ಕೊರೊನಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಂಪೂರ್ಣ ಉಚಿತವಾಗಿದೆ. ಕಲಾವಿದರು ಹಾಗೂ ಕಲಾ ತಂಡದವರಿಗೆ ತಲಾ 3 ಸಾವಿರ ರೂಪಾಯಿ ಪರಿಹಾರ ಧನವನ್ನ ನೀಡಲಾಗುವುದು ಎಂದು ಹೇಳಿದ್ರು.

ಪ್ರಧಾನ್​ ಮಂತ್ರಿ ಗರೀಬ್ ಕಲ್ಯಾಣ್​ ಯೋಜನೆಯಡಿಯಲ್ಲಿ ಬಿಪಿಎಲ್​ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ 5 ಕೆಜಿ ಅಕ್ಕಿ ಉಚಿತವಾಗಿ ಸಿಗಲಿದೆ. ಎಪಿಎಲ್​ ಕಾರ್ಡ್​ದಾರರಿಗೆ 15 ರೂಪಾಯಿಯಂತೆ ಐದು ಕೆಜಿ ಅಕ್ಕಿ ಸಿಗಲಿದೆ. ಅಲ್ಲದೇ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೂ ಉಚಿತ ಪಡಿತರ ಸಿಗಲಿದೆ.

ಗ್ಯಾಸ್​ ವಿತರಕರು, ಕೆಇಬಿ ಲೈನ್‌ ಮ್ಯಾನ್ ಹಾಗೂ ಶಿಕ್ಷಕರಿಗೆ ಆದ್ಯತೆಯ ಮೇರೆ ಕೊರೊನಾ ಲಸಿಕೆ ಸಿಗಲಿದೆ. ಗ್ರಾಮೀಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಎನ್ಡಿಆರ್ಎಫ್​ ನಿಧಿಯನ್ನ ಬಳಕೆ ಮಾಡಬಹುದು ಎಂದು ಹೇಳಿದ್ರು.

ಲಾಕ್​ಡೌನ್​ ವಿಸ್ತರಣೆ ವಿಚಾರವಾಗಿಯೂ ಮಾತನಾಡಿದ ಅವ್ರು ಇಲ್ಲಿಯವರೆಗೆ ಈ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. 23ನೇ ತಾರೀಖಿನಿಂದ ಸಭೆ ಕರೆದು ಲಾಕ್​ಡೌನ್​ ವಿಸ್ತರಣೆ ಮಾಡಬೇಕೋ ಬೇಡವೋ ಅನ್ನೋದರ ಬಗ್ಗೆ ನಿರ್ಧಾರ ಕೈಗೊಂಡು ಘೋಷಣೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...