ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರಕಾರ ಘೋಷಿಸಿದ 5000 ರೂ. ಪರಿಹಾರ ಧನವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.
ನಿನ್ನೆಯಿಂದ ಬ್ಯಾಂಕ್ ಖಾತೆಗೆ ಜಮಾ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಖಾತೆಗೆ ಹಣ ಪಾವತಿಯಾದ ಗ್ರಾಹಕರಿಗೆ ಬ್ಯಾಂಕ್ನಿಂದ ಮೆಸೇಜ್ ಬರಲಾರಂಭಿಸಿದೆ.
ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಘೋಷಿಸಲಾದ ಪರಿಹಾರ ಹಣ ವಿಳಂಬವಾಗದಂತೆ ಪಾವತಿಸಬೇಕೆಂದು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.