alex Certify BIG NEWS: ಬೆಚ್ಚಿಬಿದ್ದ ಬಿಜೆಪಿ, ರಾಜಕೀಯ ವಲಯದಲ್ಲೇ ಸಂಚಲನ ಮೂಡಿಸಿದ ಬೆಳವಣಿಗೆ – BSY ಕೆಳಗಿಳಿಸಲು ರಹಸ್ಯ ಕಾರ್ಯತಂತ್ರ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಚ್ಚಿಬಿದ್ದ ಬಿಜೆಪಿ, ರಾಜಕೀಯ ವಲಯದಲ್ಲೇ ಸಂಚಲನ ಮೂಡಿಸಿದ ಬೆಳವಣಿಗೆ – BSY ಕೆಳಗಿಳಿಸಲು ರಹಸ್ಯ ಕಾರ್ಯತಂತ್ರ..?

ರಾಜ್ಯ ರಾಜಕಾರಣದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆದಿವೆ. ಬಿಜೆಪಿ ಪಾಳಯ  ಮಾತ್ರವಲ್ಲ ರಾಜ್ಯ ರಾಜಕೀಯದಲ್ಲೂ ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ. ಸಿಎಂ ಯಡಿಯೂರಪ್ಪನವರ ಕುರ್ಚಿಯನ್ನು ಅಲ್ಲಾಡಿಸುವ ಕುರಿತು ನಡೆದ ಬೆಳವಣಿಗೆ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆಗೆ ನಾಂದಿಯಾಗಬಹುದಾದ ಬೆಳವಣಿಗೆ ನಡೆದಿದೆ ಎಂದು ಹೇಳಲಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಅಧಿವೇಶನದ ವೇಳೆಯಲ್ಲೇ ಅಸಮಾಧಾನ ಸ್ಫೋಟಗೊಂಡಿತ್ತು. ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಪರ್ಯಾಯ ನಾಯಕತ್ವಕ್ಕಾಗಿ ರಣತಂತ್ರ ರೂಪಿಸಲಾಗಿತ್ತು. ಆದರೆ, ಕೊರೋನಾ ಕಾರಣದಿಂದ ಸದ್ಯಕ್ಕೆ ಸ್ಥಗಿತಗೊಂಡಿತ್ತು ಎನ್ನಲಾಗಿದೆ.

ಸರ್ಕಾರದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರ ಅತಿಯಾದ ಹಸ್ತಕ್ಷೇಪಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿ ಬಿಜೆಪಿ ರೆಬೆಲ್ ಶಾಸಕರ ಸಭೆಯಲ್ಲಿ ಈ ಕುರಿತಾಗಿ ಚರ್ಚೆ ನಡೆದಿದೆ. ವಿಜಯೇಂದ್ರ ವಿರುದ್ಧ ಶಾಸಕರು ಸಿಡಿದೆದ್ದಿದ್ದಾರೆ. ಯಡಿಯೂರಪ್ಪ ಹೆಸರಲ್ಲಿ ವಿಜಯೇಂದ್ರ ಆಡಳಿತ ನಡೆಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗಿದ್ದು, ಯಡಿಯೂರಪ್ಪರನ್ನು ಕೆಳಗಳಿಸುವ ಜೊತೆಗೆ ಪರ್ಯಾಯ ನಾಯಕತ್ವದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...