
ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಸೆಪ್ಟಂಬರ್ 21 ರಿಂದ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಆರಂಭವಾಗಲಿದ್ದು ಅಷ್ಟರೊಳಗೆ ಸಚಿವ ಸಂಪುಟ ವಿಸ್ತರಣೆಗೆ ಚಿಂತನೆ ನಡೆಸಲಾಗಿದೆ.
ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ.ಯೋಗೇಶ್ವರ್, ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ವಾರ ದೆಹಲಿಗೆ ತೆರಳಲಿದ್ದು ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ. ಅಧಿವೇಶನಕ್ಕೆ ಮೊದಲು ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎನ್ನಲಾಗಿದೆ.