
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರಿಗೂ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಪದ್ಮಾವತಿ ಅವರಿಗೆ ಯಾವುದೇ ಕೊರೋನಾ ಗುಣ ಲಕ್ಷಣಗಳು ಕಂಡುಬಂದಿಲ್ಲ.
ಕಳೆದ 2 ದಿನದಿಂದ ಸಿಎಂ ಯಡಿಯೂರಪ್ಪ ಅವರ ಸಂಪರ್ಕಕ್ಕೆ ಬಂದಿದ್ದ ಶಾಸಕರು, ಸಚಿವರು, ಅಧಿಕಾರಿಗಳು, ಕುಟುಂಬದವರು, ಸಿಬ್ಬಂದಿಗೆ ಕೊರೋನಾ ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎನ್ನಲಾಗಿದೆ.