ನವದೆಹಲಿ: ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದಿಂದ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.
ಕರ್ನಾಟಕದ ಮಾದರಿಯನ್ನು ಅನುಸರಿಸಲು ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಕೊರೊನಾ ಸೋಂಕಿತರು, ಸಂಪರ್ಕಿತರ ಪತ್ತೆ, ಮನೆಮನೆ ಸಮೀಕ್ಷೆಗೆ ತಂತ್ರಜ್ಞಾನ ಬಳಕೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಲಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ಹೇಳಿಕೆ ಬಿಡುಗಡೆ ಮಾಡಿ, ಕರ್ನಾಟಕ ಕೈಗೊಂಡಿರುವ ಯಶಸ್ವಿ ಕಾರ್ಯಕ್ರಮಗಳನ್ನು ಎಲ್ಲ ರಾಜ್ಯಗಳು ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದ್ದು, ಇದಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಖುಷಿಯಾಗಿದ್ದಾರೆ.
ರಾಜ್ಯದಲ್ಲಿ ಕೋರೋನಾ ನಿಯಂತ್ರಣಕ್ಕೆ ಅತ್ಯುತ್ತಮ ನೀತಿಗಳು, ಪರಿಣಾಮಕಾರಿ ಅನುಷ್ಠಾನ ಜೊತೆಗೆ ಉತ್ತಮ ಆಡಳಿತ ಕಾರಣ. ಇದಕ್ಕೆ ಕಾರಣರಾದ ರಾಜ್ಯದ ಕೊರೋನ ವಾರಿಯರ್ಸ್ ಮತ್ತವರ ತಂಡಕ್ಕೆ ಅಭಿನಂದನೆಗಳು ಎಂದು ಸಿಎಂ ಹೇಳಿದ್ದಾರೆ.