alex Certify ಮದುವೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ‘ಸಿಹಿ ಸುದ್ದಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ‘ಸಿಹಿ ಸುದ್ದಿ’

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಂಧ್ರಪ್ರದೇಶದ ತಿರುಮಲ ಕರ್ನಾಟಕ ಛತ್ರಕ್ಕೆ ಸೇರಿದ ಸ್ಥಳಗಳಲ್ಲಿ ನೂತನ ವಸತಿ ಗೃಹಗಳ ನಿರ್ಮಾಣಕ್ಕೆ 200 ಕೋಟಿ ರೂ.ಗಳ ಅನುದಾನ ಮಂಜೂರು ಮಾಡುವ ಬಗ್ಗೆ ಚರ್ಚಿಸಲಾಗಿದೆ.

ತಿರುಮಲದಲ್ಲಿ ಕೂಡಲೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ವಹಿಸಲು ಸೂಚನೆ ನೀಡಲಾದ್ದು, ಕಾಮಗಾರಿಯ ಅಂದಾಜು ವೆಚ್ಚ ಹಾಗೂ ಕೊಠಡಿಗಳ ಅಳತೆಯನ್ನು ಮತ್ತೊಮ್ಮೆ ಪರಿಶೀಲಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ.

50 ದೇವಸ್ಥಾನಗಳಿಗೆ ಆನ್ ಲೈನ್ ಬುಕಿಂಗ್ ಸೇವೆಯ ವಿಸ್ತರಣೆ ಮಾಡಲಾಗಿದ್ದು, 50 ಜನರಿಗೆ ಸೀಮಿತಗೊಳಿಸಿ ಮದುವೆ ಮಾಡಿಸಲು ತೀರ್ಮಾನಿಸಲಾಗಿದೆ.

ಕಂದಾಯ ಸಚಿವ ಆರ್.ಅಶೋಕ್, ಮೀನುಗಾರಿಕೆ, ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಎಸ್.ಆರ್.ವಿಶ್ವನಾಥ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ  ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮುಜುರಾಯಿ ಇಲಾಖೆಯ ವತಿಯಿಂದ ಕರ್ನಾಟಕದ ಪ್ರಮುಖ ದೇವಾಲಯಗಳ ಇ-ಕಾಣಿಕೆ ಮತ್ತು ಸೇವೆಗಳ ಆನ್ ಲೈನ್ ಬುಕ್ಕಿಂಗ್ ಸೌಕರ್ಯಕ್ಕೆ ಸಿಎಂ ಚಾಲನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...