ಬೆಂಗಳೂರು: ಬಿಜೆಪಿ ಶಾಸಕರಾದ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಚರ್ಚಿಸಿದ್ದಾರೆ. ಜಾಗಿಂಗ್ ವೇಳೆಯಲ್ಲಿ ನಾಯಕರು ಚರ್ಚೆ ನಡೆಸಿದ್ದಾರೆ.
ರಾಜ್ಯಸಭೆ ಚುನಾವಣೆಗೆ ಮಾಜಿ ಸಂಸದ ರಮೇಶ್ ಕತ್ತಿಗೆ ಟಿಕೆಟ್ ನೀಡಲು ಶಿಫಾರಸು ಮಾಡಲಾಗಿದ್ದು, ಈ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ. ಅಲ್ಲದೇ, ಸಚಿವ ಸ್ಥಾನದ ವಿಚಾರವಾಗಿಯೂ ಚರ್ಚೆ ನಡೆಸಲಾಗಿದೆ.