alex Certify ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲು: ಸಿಎಂ ಭೇಟಿಯಾದ ಡಿಕೆಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲು: ಸಿಎಂ ಭೇಟಿಯಾದ ಡಿಕೆಶಿ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿರುವ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಕಾಂಗ್ರೆಸ್ ನಾಯಕರ ನಿಯೋಗ ಸೋನಿಯಾ ಗಾಂಧಿಯವರ ವಿರುದ್ಧ ಪ್ರಕರಣ ಕೈಬಿಡಬೇಕೆಂದು ಮನವಿ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹಮ್ಮದ್ ಸೇರಿದಂತೆ ಹಲವು ನಾಯಕರು ನಿಯೋಗ ತೆರಳಿ ಸಿಎಂ ಅವರನ್ನು ಭೇಟಿ ಮಾಡಿದ್ದಾರೆ.

ಸಿಎಂ ಭೇಟಿ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಇಡೀ ದೇಶಕ್ಕೆ ಆಶ್ಚರ್ಯಕರ ವಿಷಯವಾಗಿದೆ. ಮುಖ್ಯಮಂತ್ರಿಯವರಿಗೆ ಈ ಕುರಿತು ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸೋನಿಯಾ ಗಾಂಧಿಯವರು ತಮ್ಮ ಬಳಿ ಇರುವ ಮಾಹಿತಿಯನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ಅವರು ನೀಡಿದ ಮಾಹಿತಿ ನಿಖರವಾದ ಮಾಹಿತಿಯಾಗಿದೆ. ಸಾಗರ ಪೊಲೀಸ್ ಠಾಣೆಯಲ್ಲಿ ಸೋನಿಯಾ ಗಾಂಧಿಯವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಮಾಡಿದ್ದು ಠಾಣಾಧಿಕಾರಿ ವಿರುದ್ಧ ಕ್ರಮಕೈಗೊಳ್ಳುವಂತೆ ಹೇಳಿದ್ದೇವೆ. ಪ್ರಕರಣ ಕೈಬಿಡಲು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...