ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದ್ದಾರೆ.
ರಾಜ್ಯದ ಮುಖ್ಯ ಕಾರ್ಯದರ್ಶಿಗಳು, ಸೇರಿದಂತೆ ಹಿರಿಯ ಅಧಿಕಾರಿಗಳು, ಸಚಿವರೊಂದಿಗೆ ಸಿಎಂ ಸಮಾಲೋಚನೆ ನಡೆಸಿದ್ದು ಬೆಂಗಳೂರಿನಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಒಂದು ವಾರ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಬುಧವಾರದಿಂದ ಮುಂದಿನ ಒಂದು ವಾರ ಲಾಕ್ಡೌನ್ ಜಾರಿ ಮಾಡಲಾಗುವುದು. ಉಳಿದಂತೆ ಕೊರೊನಾ ಸೋಂಕು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿ ಮಾಡುವ ಕುರಿತು ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಗಂಭೀರ ಚಿಂತನೆ ನಡೆಸಿದ್ದಾರೆ. ಉನ್ನತ ಮಟ್ಟದ ಸಭೆಯಲ್ಲಿ ಮುಂದಿನ ಬುಧವಾರದಿಂದ ಒಂದು ವಾರ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಮಹತ್ವದ ಚರ್ಚೆ ನಡೆದಿದೆ. ಲಾಕ್ ಡೌನ್ ಜಾರಿ ಮಾಡುವುದರಿಂದ ಆಗಬಹುದಾದ ಸಮಸ್ಯೆ, ಬೆಳವಣಿಗೆಗಳ ಕುರಿತು ಚರ್ಚೆ ನಡೆದಿದ್ದು, ಸೋಂಕು ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಠಿಣ ಲಾಕ್ ಡೌನ್ ಜಾರಿ ಮಾಡಿ ಉಳಿದೆಡೆ ಯಥಾಸ್ಥಿತಿ ಮುಂದುವರೆಸುವ ಬಗ್ಗೆಯೂ ಚರ್ಚೆ ನಡೆದಿದೆ. ಈ ಕುರಿತಾಗಿ ಸಿಎಂ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ