ಶಿವಮೊಗ್ಗ: ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದ ಸಂತ್ರಸ್ತರಾದವರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆ ಶಿಕಾರಿಪುರಕ್ಕೆ ಆಗಮಿಸಿದ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಹೆಚ್ಚಿನ ಪರಿಹಾರ ನೀಡಲು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರವಾಹಸ್ಥಿತಿ ಬಗ್ಗೆ ಮಾಹಿತಿ ಪಡೆದ ಪ್ರಧಾನಿಯವರು ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಕೇಂದ್ರದ ಅನುದಾನ ಬಳಸಿಕೊಂಡು ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.