alex Certify ರಾಜ್ಯದ ಜನತೆಗೆ ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ಬೆಂಗಳೂರು: ಲಾಕ್ಡೌನ್ ಜಾರಿಯಾಗಿರುವುದರಿಂದ ಕುಸಿದ ಆರ್ಥಿಕತೆಗೆ ಪುನಶ್ಚೇತನ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕ್ರಮಕೈಗೊಂಡಿದ್ದಾರೆ. ಇದೇ ವೇಳೆ ಸಂಕಷ್ಟದಲ್ಲಿರುವ ರೈತರು, ಅಸಂಘಟಿತ ಕಾರ್ಮಿಕರು, ನೇಕಾರರು ಮತ್ತಿತರ ಸಮುದಾಯಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪತ್ರಿಕಾಗೋಷ್ಠಿ ಕರೆದಿದ್ದು, ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಹಣಕಾಸಿನ ಇತಿಮಿತಿಯೊಳಗೆ ಸೌಲಭ್ಯ ನೀಡಲಾಗುವುದು ಎಂದು ಸುಳಿವು ನೀಡಿದ್ದಾರೆ.

ವಲಸೆ ಕಾರ್ಮಿಕರು ಕೆಲಸ ಮಾಡುತ್ತಿರುವ ಸಂಸ್ಥೆಗಳಲ್ಲಿ ಕೆಲಸ ಒದಗಿಸಲು ಸರ್ಕಾರ ಕ್ರಮಕೈಗೊಂಡಿದೆ ಇದಕ್ಕೆ ಕೈಗಾರಿಕೆ ಸಂಸ್ಥೆಗಳು ಕೂಡ ಇವೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಿಎಂ ಅಸಂಘಟಿತ ಕಾರ್ಮಿಕರಿಗೆ ಸಹಾಯಧನ, ವಿಶೇಷ ಆರ್ಥಿಕ ಪ್ಯಾಕೇಜ್ ಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡುವ ನಿರೀಕ್ಷೆಯಿದೆ. ಇದೇ ವೇಲೆ ಸರ್ಕಾರದ ಆಡಳಿತ ವೈಖರಿ ಟೀಕಿಸುವ ವಿರೋಧ ಪಕ್ಷದ ನಾಯಕರಿಗೆ ತಿರುಗೇಟು ನೀಡುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...