alex Certify ರಾಜ್ಯದ ಹಲವೆಡೆ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ, ಮುಂಜಾಗ್ರತೆ ವಹಿಸಲು ಸಿಎಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಹಲವೆಡೆ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ, ಮುಂಜಾಗ್ರತೆ ವಹಿಸಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು‌ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಮಳೆಯ ಬಗ್ಗೆ ಕ್ಷಣ ಕ್ಷಣದ ಮಾಹಿತಿಯನ್ನು ತೆಗೆದುಕೊಳ್ಳುವುದು ಸೇರಿದಂತೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವಂತೆ ಸೂಚನೆ ನೀಡಿದ್ದಾರೆ. ತುರ್ತು ಸಂದರ್ಭಕ್ಕಾಗಿ ಕೂಡಲೇ 50 ಕೋಟಿ‌ ರೂ. ಬಿಡುಗಡೆಗೊಳಿಸುವಂತೆ ಸೂಚನೆ‌ ನೀಡಿದ್ದು, ಕೆಲ‌ ಜಿಲ್ಲಾಧಿಕಾರಿಗಳ ಜೊತೆ ಪೋನ್ ಮುಖಾಂತರ ಸಂಪರ್ಕ ಮಾಡಿ ಮಳೆಯ ಬಗ್ಗೆ ಮಾಹಿತಿ ‌ಪಡೆದುಕೊಂಡಿದ್ದಾರೆ.

ಇದರ ಜೊತೆಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ದರ್ಶನ್ ಅವರಿಗೆ ಕರೆ ಮಾಡಿ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...