ಬೆಂಗಳೂರು: ಈ ಹಿಂದಿನಂತೆಯೇ ಮಳೆಹಾನಿ ಪರಿಹಾರ ವಿತರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮನೆಗಳಿಗೆ ಹಾನಿಯಾಗಿದ್ದರೆ ತಕ್ಷಣಕ್ಕೆ 10 ಸಾವಿರ ರೂಪಾಯಿ ಪರಿಹಾರ ನೀಡಬೇಕು. ಮಳೆಯಿಂದ ಮನೆ ಸಂಪೂರ್ಣ ಹಾನಿಗೀಡಾದರೆ 5 ಲಕ್ಷ ರೂಪಾಯಿ ಪರಿಹಾರ ಹಾಗೂ ಭಾಗಶಃ ಹಾನಿಯಾಗಿದ್ದರೆ ಪರಿಶೀಲಿಸಿ ಸೂಕ್ತ ಪರಿಹಾರ ವಿತರಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈಗಾಗಲೇ ಜಿಲ್ಲಾಕೇಂದ್ರಗಳಲ್ಲಿ ಇರುವ ಹಾಸ್ಟೆಲ್, ಶಾಲಾ, ಕಾಲೇಜುಗಳನ್ನು ಕೋವಿಡ್ ಕೇಂದ್ರಗಳಾಗಿಸಿರುವುದರಿಂದ ಹಳ್ಳಿಗಳಲ್ಲಿರುವ ಶಾಲಾ, ಕಾಲೇಜ್ ಗಳನ್ನು ಪರಿಹಾರ ಕೇಂದ್ರಗಳಾಗಿ ಮಾಡಿ ಸೌಲಭ್ಯವನ್ನು ಒದಗಿಸುವಂತೆ ತಿಳಿಸಿದ್ದಾರೆ. ಬೆಳೆ ಹಾನಿಯ ಬಗ್ಗೆ ಸರ್ವೆ ಮಾಡಿ ವರದಿ ನೀಡಲು ತಿಳಿಸಿದ್ದು ಪ್ರತಿದಿನ ಒಟ್ಟು ಹಾನಿಯ ಬಗ್ಗೆಯೂ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ತಿಳಿಸಿದ್ದಾರೆ.