ಬೆಂಗಳೂರು: ನೆರೆ ಹಾನಿಗೊಳಗಾದ ಪ್ರದೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವೈಜ್ಞಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಅಕ್ಟೋಬರ್ 21 ರಂದು ಸಿಎಂ ಕಲಬುರ್ಗಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಉತ್ತರ ಕರ್ನಾಟಕ ಭಾಗದ ಯಾದಗಿರಿ, ವಿಜಯಪುರ, ರಾಯಚೂರು, ಕಲಬುರ್ಗಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಹಾನಿಯಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಬಗ್ಗೆ ಜಿಲ್ಲಾಡಳಿತಗಳಿಂದ ಮಾಹಿತಿ ಪಡೆದ ಸಿಎಂ ವೈಮಾನಿಕ ಸಮೀಕ್ಷೆ ನಡೆಸಿ ಪರಿಶೀಲಿಸಲಿದ್ದಾರೆ. ಸಂತ್ರಸ್ತರ ಭೇಟಿಯಾಗಿ ಧೈರ್ಯ ಹೇಳಲಿದ್ದಾರೆ.