alex Certify BIG NEWS: ಸಹಕಾರ ಸಂಸ್ಥೆಗಳ ಚುನಾವಣೆ ಮುಂದೂಡಿಕೆ ಆದೇಶಕ್ಕೆ ಹೈಕೋರ್ಟ್ ತಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಹಕಾರ ಸಂಸ್ಥೆಗಳ ಚುನಾವಣೆ ಮುಂದೂಡಿಕೆ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಸಹಕಾರ ಸಂಸ್ಥೆಗಳ ಚುನಾವಣೆ ಮುಂದೂಡಿಕೆಗೆ ಹೈಕೋರ್ಟ್ ತಡೆ ನೀಡಿದೆ. ರಾಜ್ಯದ ಸಹಕಾರಿ ಸಂಘಗಳು ಮತ್ತು ಬ್ಯಾಂಕುಗಳ ಚುನಾವಣೆಯನ್ನು ಮುಂದೂಡಿ ಆಡಳಿತಾಧಿಕಾರಿಗಳನ್ನು ನೇಮಿಸುವ ರಾಜ್ಯ ಸರ್ಕಾರ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಪುತ್ತೂರಿನ ದಕ್ಷಿಣ ಕನ್ನಡ ಸಹಕಾರಿ ಸಗಟು ಮಾರಾಟ ಸಂಘದ ಅಧ್ಯಕ್ಷ ಉದಯ ಮಾದೋರಿ ಮೊದಲಾದವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆ ನೀಡಿದೆ.

ರಾಜ್ಯ ಸಹಕಾರ ಇಲಾಖೆ ಕಾರ್ಯದರ್ಶಿ, ಸಹಕಾರ ಸಂಘಗಳ ನಿಬಂಧಕರು, ರಾಜ್ಯ ಸಹಕಾರ ಸಂಘಗಳ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ನ್ಯಾಯಮೂರ್ತಿ ಸಂಜಯ್ ಗೌಡ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ. ಸಹಕಾರಿ ಸಂಸ್ಥೆಗಳಿಗೆ ಚುನಾವಣೆ ಮುಂದೂಡಿಕೆ ಮಾಡಿ ಆಡಳಿತಾಧಿಕಾರಿಗಳನ್ನು ನೇಮಿಸುವ ಸರ್ಕಾರ ಆದೇಶ ಕಾನೂನುಬಾಹಿರವಾಗಿದ್ದು, ಇದಕ್ಕೆ ತಡೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...