ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಪ್ರದೇಶದಲ್ಲಿ ಆಗಸ್ಟ್ 3 ರಿಂದ 7 ರವರೆಗೆ ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಪ್ರದೇಶದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ. ವೇಗದ ಗಾಳಿ ಬೀಸುತ್ತಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.