ಬೆಂಗಳೂರು: ರಾಜ್ಯದಲ್ಲಿ ಇಂದು ವ್ಯಾಪಕವಾಗಿ ಮಳೆಯಾಗಿದೆ. ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಮುಂದಿನ 5 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 16 ರಿಂದ 20 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ.
ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಇನ್ನೂ ಮುಂದುವರೆಯಲಿದೆ. ಅರಬ್ಬಿಸಮುದ್ರದ ಪೂರ್ವಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎನ್ನಲಾಗಿದೆ.