ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಸೋಮವಾರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಂಗಳವಾರದವರೆಗೆ ಸಾಧಾರಣದಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ, ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಸೆಪ್ಟಂಬರ್ 1 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ, ನಂತರ ಹೆಚ್ಚಿನ ಮಳೆಯಾಗಲಿದೆ. ಸೆಪ್ಟಂಬರ್ 2 ಮತ್ತು 3ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಬುಧವಾರ ಮತ್ತು ಗುರುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.