alex Certify ಗಮನಿಸಿ…! ಬಿರುಸುಗೊಂಡ ಮುಂಗಾರು, ಹಲವೆಡೆ ತತ್ತರಿಸಿದ ಜನ – ಮತ್ತೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಬಿರುಸುಗೊಂಡ ಮುಂಗಾರು, ಹಲವೆಡೆ ತತ್ತರಿಸಿದ ಜನ – ಮತ್ತೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರುಮಳೆ ಬಿರುಸುಗೊಂಡಿದ್ದು ಇವತ್ತು ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಈಗಾಗಲೇ ಭಾರೀ ಮಳೆ, ನೆರೆಹಾವಳಿಯಿಂದಾಗಿ ಅನೇಕ ಜಿಲ್ಲೆಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ವಿಜಯಪುರ, ರಾಯಚೂರು, ಕಲಬುರ್ಗಿ, ಕೊಪ್ಪಳ, ಯಾದಗಿರಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 19 ರ ವರೆಗೆ ಮಳೆಯಾಗಲಿ ಗಂಟೆಗೆ ಸುಮಾರು 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. 3.3 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...