ಬೆಂಗಳೂರು: ಕಳೆದ 7 ತಿಂಗಳಿನಿಂದ ಬಂದ್ ಆಗಿದ್ದ ಕಾಲೇಜುಗಳ ಆರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ನವಂಬರ್ 17 ರಿಂದ ಕಾಲೇಜುಗಳು ಆರಂಭವಾಗಲಿವೆ.
ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಬಿಇ ಮತ್ತು ವೈದ್ಯ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಸಮ್ಮತಿಸಿದೆ. ಆದರೆ, ಹಾಜರಾತಿ ಕಡ್ಡಾಯವಲ್ಲ, ಪೋಷಕರ ಅನುಮತಿಯನ್ನು ಪಡೆದು ವಿದ್ಯಾರ್ಥಿಗಳು ಕಾಲೇಜಿಗೆ ಬರಬಹುದು.
ಕಾಲೇಜಿಗೆ ಆಗಮಿಸದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನೀಡಲಾಗುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ತರಗತಿಯಲ್ಲಿ 30 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ. ಪಾಳಿ ಪದ್ಧತಿಯಲ್ಲಿ ತರಗತಿಗಳನ್ನು ನಡೆಸಲಾಗುತ್ತಿದೆ. 5 ದಿನಗಳ ತರಗತಿ ನಡೆಯಲಿದ್ದು ವಾರಂತ್ಯದಲ್ಲಿ ಆನ್ಲೈನ್ ಕ್ಲಾಸ್, ಲ್ಯಾಬ್ ನಡೆಯಲಿವೆ ಎಂದು ಹೇಳಲಾಗಿದೆ.