
ಬೆಂಗಳೂರು: ಖಾಸಗಿ ಕಾಲೇಜುಗಳ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಟ್ ಕೋರ್ಸ್ ಗಳ ಪ್ರವೇಶಕ್ಕೆ ನಡೆಯುವ ಕಾಮೆಡ್-ಕೆ ಪರೀಕ್ಷೆಯನ್ನು ಮುಂದೂಡಲಾಗಿದೆ.
ಕೊರೋನಾ ಕಾರಣದಿಂದಾಗಿ ಮೂರನೇ ಬಾರಿಗೆ ಕಾಮೆಡ್-ಕೆ ಪರೀಕ್ಷೆ ಮುಂದೂಡಲ್ಪಟ್ಟಿದೆ. ಆಗಸ್ಟ್ 1 ರಂದು ಕಾಮೆಡ್-ಕೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಜುಲೈ 25 ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ನೀಟ್ ಪರೀಕ್ಷೆ ಕಾರಣದಿಂದ ಕಾಮೆಡ್-ಕೆ ಪರೀಕ್ಷೆ ದಿನಾಂಕ ಬದಲಾಗಿದೆ ಎಂದು ಹೇಳಲಾಗಿದೆ.