alex Certify ಇಂದು ನಡೆಯಲಿದೆ ಕಾಮೆಡ್ – ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ನಡೆಯಲಿದೆ ಕಾಮೆಡ್ – ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸುವ ಕಾಮೆಡ್-ಕೆ ಪರೀಕ್ಷೆ ಇಂದು ನಡೆಯಲಿದೆ.

ದೇಶಾದ್ಯಂತ 160 ನಗರಗಳ 259 ಕೇಂದ್ರಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆ, ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಕಾಮೆಡ್-ಕೆ ಪರೀಕ್ಷೆ ಆನ್ಲೈನ್ ಮೂಲಕ ನಡೆಯಲಿದ್ದು ದೇಶಾದ್ಯಂತ 61,290 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ.

ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಪರೀಕ್ಷಾರ್ಥಿಗಳಿಗೆ ಎಸ್ಎಂಎಸ್ ಮೂಲಕ ನೀಡಲಾಗಿದ್ದು, ಪ್ರವೇಶಪತ್ರ ಮತ್ತು ಎರಡು ಪಾಸ್ಪೋರ್ಟ್ ಅಳತೆಯ ಫೋಟೋ ತೆಗೆದುಕೊಂಡು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕಿದೆ. ಕೊರೋನಾ ಕಾರಣದಿಂದಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...