alex Certify ಕಾಮೆಡ್ – ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮೆಡ್ – ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಖಾಸಗಿ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಟ್ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಕಾಮೆಡ್ – ಕೆ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ.

ಜುಲೈ 25 ರಂದು ಕಾಮೆಡ್ – ಕೆ ಪರೀಕ್ಷೆ ನಡೆಯಲಿದೆ. ಇದುವರೆಗೆ ಕಾಮೆಡ್ – ಕೆ ಪರೀಕ್ಷೆಗೆ ನೋಂದಣಿ ಮಾಡಿಸಿಕೊಳ್ಳದ ವಿದ್ಯಾರ್ಥಿಗಳು ಜೂನ್ 14 ರಂದು ಮಧ್ಯಾಹ್ನ 12 ಗಂಟೆಯಿಂದ ಜೂನ್ 17 ರಂದು ಸಂಜೆ 5 ಗಂಟೆಯವರೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ಈಗಾಗಲೇ ಕಾಮೆಡ್ – ಕೆ ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಜೂನ್ 18 ರಂದು ಸಂಜೆ 5 ಗಂಟೆಯಿಂದ ಜೂನ್ 21 ರಂದು ಸಂಜೆ 5 ಗಂಟೆಯವರೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ತಿದ್ದುಪಡಿ ಮಾಡಬಹುದಾಗಿದೆ ಮಾಹಿತಿಗಾಗಿ www.comedk.org ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...