ರಾಜ್ಯದಲ್ಲಿ ರೆಮಿಡಿಸಿವರ್ ಹಾಗೂ ವೈದ್ಯಕೀಯ ಆಮ್ಲಜನಕದ ಅಭಾವ ಉಂಟಾಗಿರುವ ಹಿನ್ನೆಲೆ ಡಿಸಿಎಂ ಅಶ್ವತ್ಥ ನಾರಾಯಣ್ ನೇತೃತ್ವದಲ್ಲಿ ಸಭೆ ನಡೆಸಲಾಯ್ತು. ಈ ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಟಾಸ್ಕ್ ಫೋರ್ಸ್ ಸಭೆಯಲ್ಲಿ ರಾಜ್ಯದಲ್ಲಿ ಕೊರೊನಾ ನಿರ್ವಹಣೆ ಕುರಿತಂತೆ ಹಲವು ಮಹತ್ವದ ಕ್ರಮಗಳನ್ನ ಕೈಗೊಳ್ಳಲಾಗಿದ್ದು ಸಂಪುಟ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಲಾಗುವುದು ಎಂದು ಡಾ. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸಭೆಯಲ್ಲಿ ಮಾತನಾಡಿದ ಡಾ. ಅಶ್ವತ್ಥ ನಾರಾಯಣ್, ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನರ್ ಬೆಡ್ಗೆ 1000 ರೂಪಾಯಿ ಜಾಸ್ತಿ ಮಾಡಲಾಗಿದೆ. ಇನ್ನು ಐಸಿಯು ಹಾಗೂ ವೆಂಟಿಲೇಟರ್ ಬೆಡ್ಗೆ 1500 ರೂಪಾಯಿ ಹೆಚ್ಚಿಸಲಾಗಿದೆ. ಲಸಿಕೆ ಬಗ್ಗೆಯೂ ಸಾಕಷ್ಟು ಚರ್ಚೆಯನ್ನ ನಡೆಸೋದಿದೆ. ಔಷಧಿಗಳನ್ನ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕೊಂಡುಕೊಳ್ಳಬೇಕು. ಈ ಬಗ್ಗೆ ಸೂಕ್ತ ಮಾಹಿತಿ ನೀಡುವಂತೆ ತಾಂತ್ರಿಕ ಸಲಹಾ ಸಮಿತಿಯನ್ನ ಕೇಳಲಾಗಿದೆ ಎಂದು ಹೇಳಿದ್ರು.
ಇನ್ನು ರೆಮಿಡಿಸಿವರ್ ವಿಚಾರವಾಗಿಯೂ ಮಾತನಾಡಿದ ಅವರು 5 ಲಕ್ಷ ರೆಮಿಡಿಸಿವರ್ ಚುಚ್ಚು ಮದ್ದುಗಳನ್ನ ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತೆ. ಟೆಂಡರ್ ಕರೆದ ಬಳಿಕ ವಿದೇಶದಿಂದ ರೆಮಿಡಿಸಿವರ್ನ್ನು ಆಮದು ಮಾಡಿಕೊಳ್ಳಲಾಗುತ್ತೆ. ಹಾಗೂ ರಾಜ್ಯದಲ್ಲಿ 1912 ಸಹಾಯವಾಣಿ ಸಂಖ್ಯೆಯನ್ನ ಹೆಚ್ಚಿಸಲಿದ್ದೇವೆ ಎಂದು ಹೇಳಿದ್ರು.
ಖಾಸಗಿ ಆಸ್ಪತ್ರೆಯಲ್ಲಿ ಹಣ ವಸೂಲಿ ವಿಚಾರವಾಗಿಯೂ ಮಾತನಾಡಿದ ಅಶ್ವತ್ಥ ನಾರಾಯಣ್, ಇಂತಹ ಸಮಸ್ಯೆಗಳು ಕಂಡು ಬಂದಲ್ಲಿ 112ಗೆ ಕರೆ ಮಾಡಿ ತಕ್ಷಣ ದೂರನ್ನ ನೀಡಿ. ದೂರು ನೀಡಿದ ಬಳಿಕ ಸರ್ಕಾರ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ರು.