ಬೆಂಗಳೂರು: ನವೆಂಬರ್ 3 ರಂದು ರಾಜರಾಜೇಶ್ವರಿ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು ಪಕ್ಷಾಂತರ ಪರ್ವ ಜೋರಾಗಿದೆ.
ಜೆಡಿಎಸ್ ನಾಯಕರಿಗೆ ಡಿಕೆ ಸಹೋದರರು ಶಾಕ್ ನೀಡಿದ್ದಾರೆ. ಕ್ಷೇತ್ರದ ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆದಿದ್ದಾರೆ. ಜೆಡಿಎಸ್ ಮುಖಂಡ ಬೆಟ್ಟಸ್ವಾಮಿ ಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಆರ್.ಆರ್. ನಗರ ಕ್ಷೇತ್ರದ ಜೆಡಿಎಸ್ ಅಧ್ಯಕ್ಷರಾಗಿದ್ದ ಬೆಟ್ಟಸ್ವಾಮಿ ಗೌಡ ಉಪಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಬೆಟ್ಟಸ್ವಾಮಿ ಗೌಡ ಹಾಗೂ 300 ಕ್ಕೂ ಹೆಚ್ಚು ಪ್ರಮುಖರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.