ಬೆಂಗಳೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ದ ಹೋರಾಟಕ್ಕೆ ಕಾಂಗ್ರೆಸ್ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಭೆ ಸೇರಿ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ.
ವಿಧಾನಸೌಧದ ವಿಪಕ್ಷ ನಾಯಕರ ಕೊಠಡಿಯಲ್ಲಿ ವಿಪಕ್ಷ ನಾಯಕ, ಸಿ.ಎಲ್.ಪಿ. ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಮೇಶ್ ಕುಮಾರ್, ಸಿ.ಎಂ. ಇಬ್ರಾಹಿಂ, ದಿನೇಶ್ ಗುಂಡೂರಾವ್, ಜಮೀರ್ ಅಹಮ್ಮದ್, ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.