
ರಾಜ್ಯದ ಇಬ್ಬರು ಕಾಂಗ್ರೆಸ್ ನಾಯಕರಿಗೆ ಎಐಸಿಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಕಾಂಗ್ರೆಸ್ ಹೈಕಮಾಂಡ್ ಪ್ರಮುಖ ಹುದ್ದೆ ನೀಡಲು ಆಸಕ್ತಿ ತೋರಿದೆ.
ಹೆಚ್.ಕೆ. ಪಾಟೀಲ್ ಮತ್ತು ಕೆ.ಹೆಚ್. ಮುನಿಯಪ್ಪ ಅವರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ಹೆಚ್.ಕೆ. ಪಾಟೀಲ್ ಅವರಿಗೆ ಸಿಡಬ್ಲ್ಯೂಸಿಯಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ. ಈ ಹಿಂದೆ ಅವರಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಫರ್ ನೀಡಲಾಗಿತ್ತು.
ಕಾಂಗ್ರೆಸ್ ಹೈಕಮಾಂಡ್ ಪ್ರಧಾನ ಕಾರ್ಯದರ್ಶಿ ಹುದ್ದೆ ವಹಿಸಿಕೊಳ್ಳುವಂತೆ ಪಾಟೀಲ್ ಅವರಿಗೆ ಸೂಚನೆ ನೀಡಿದ್ದರೂ ರಾಜ್ಯರಾಜಕಾರಣದಲ್ಲಿ ಮುಂದುವರೆಯಲು ಅವರು ಆಸಕ್ತಿ ತೋರಿಸಿದ್ದರು. ಹಾಲಿ ಸದಸ್ಯ ಕೆ.ಹೆಚ್. ಮುನಿಯಪ್ಪ ಅವರಿಗೆ ಪರ್ಯಾಯ ಸ್ಥಾನ ನೀಡಲಾಗುವುದು. ಸಿಡಬ್ಲ್ಯುಸಿ ಬದಲಿಗೆ ಎಸ್ಸಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ನೀಡಲಾಗುವುದು ಇಲ್ಲವೇ ದಕ್ಷಿಣ ರಾಜ್ಯಗಳ ಉಸ್ತುವಾರಿ ನೀಡಲಾಗುವುದು ಎನ್ನಲಾಗಿದೆ.