ಕಾಂಗ್ರೆಸ್ ಪಕ್ಷದಿಂದ ನಿರೀಕ್ಷೆಯಂತೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ.
ಆಕಾಂಕ್ಷಿಗಳಾಗಿದ್ದ ಕಾಂಗ್ರೆಸ್ ನಾಯಕರಾದ ವೀರಪ್ಪ ಮೊಯ್ಲಿ, ಮುನಿಯಪ್ಪ ಮತ್ತು ಹರಿಪ್ರಸಾದ್ ಅವರಿಗೆ ನಿರಾಸೆಯಾಗಿದೆ. ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸುಲಭವಾಗಿ ಗೆಲ್ಲಬಹುದಾದ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಣಕ್ಕಿಳಿಸಲು ತೀರ್ಮಾನ ಕೈಗೊಂಡಿದೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ 68 ಸದಸ್ಯ ಬಲ ಹೊಂದಿದ್ದು ಅಭ್ಯರ್ಥಿ ಗೆಲುವಿಗೆ 46 ಮತಗಳು ಬೇಕಿದೆ. ಕಾಂಗ್ರೆಸ್ ಒಂದು ಸ್ಥಾನ ಗೆಲ್ಲಬಹುದಿದ್ದು, ಹಲವರು ಆಕಾಂಕ್ಷಿಗಳಾಗಿದ್ದರು. ಆದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ತೀರ್ಮಾನಿಸಿದೆ.