alex Certify SSLC ಪರೀಕ್ಷೆಯಲ್ಲಿ ಕಾಪಿ ಮಾಡಲು ನೆರವಾದ ಶಿಕ್ಷಕರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆಯಲ್ಲಿ ಕಾಪಿ ಮಾಡಲು ನೆರವಾದ ಶಿಕ್ಷಕರು ಅರೆಸ್ಟ್

ಹಾವೇರಿ ಜಿಲ್ಲೆ ಹಿರೇಕೆರೂರಿನ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರವೊಂದರಲ್ಲಿ ನಕಲು ಮಾಡಲು ಸಹಾಯ ಮಾಡಿದ 4 ಜನ ಶಿಕ್ಷಕರನ್ನು ವಶಕ್ಕೆ ಪಡೆಯಲಾಗಿದೆ.

ಖಾಸಗಿ ಕಾಲೇಜಿನ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದಲ್ಲಿ ಗುರುವಾರ ನಡೆದ ಪರೀಕ್ಷೆಗೆ ನಕಲು ಮಾಡಿಸಲು ಪ್ರಯತ್ನ ನಡೆದಿದೆ. ಪರೀಕ್ಷಾ ಕೇಂದ್ರಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಾಲ್ವರು ಶಿಕ್ಷಕರು ಸೇರಿದಂತೆ ಐವರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕರ್ತವ್ಯದ ಮೇಲೆ ಇಲ್ಲದಿದ್ದರೂ ಪರೀಕ್ಷಾ ಕೇಂದ್ರಕ್ಕೆ ಇವರು ಅಕ್ರಮವಾಗಿ ಪ್ರವೇಶಿಸಿದ್ದರು. ತಹಶೀಲ್ದಾರ್ ಪರೀಕ್ಷಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ವೇಳೆ ಓಡಿ ಹೋಗಲು ಪ್ರಯತ್ನಿಸಿದ್ದು ಅವರನ್ನು ತಡೆದು ವಿಚಾರಣೆ ಮಾಡಿದಾಗ ನಕಲು ಚೀಟಿಗಳು ಕಂಡುಬಂದಿದೆ. ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತಹಶೀಲ್ದಾರ್ ಆರ್.ಹೆಚ್. ಭಾಗವಾನ್ ಅವರು ಭೇಟಿ ನೀಡಿದ್ದ ವೇಳೆ ಇದು ಬೆಳಕಿಗೆ ಬಂದಿದೆ. ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕನ ವಿರುದ್ಧವೂ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...