ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10 ಸಾವಿರ ಗಡಿಯತ್ತ ಸಾಗಿದೆ. ಇದುವರೆಗೆ 9,966 ಜನ ಸೋಂಕಿತರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ.
ನಿನ್ನೆ ಒಂದೇ ದಿನ 9523 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 75 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,10,309 ಕ್ಕೆ ಏರಿಕೆಯಾಗಿದೆ. 5,80,054 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,20,270 ಜನ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.