
ಬೀದರ್ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 42 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ವೈದ್ಯಕೀಯ ವರದಿಯಲ್ಲಿ 42 ಮಂದಿಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 350 ಕ್ಕೆ ಏರಿಕೆಯಾಗಿದೆ.
ಬೀದರ್, ಬಸವಕಲ್ಯಾಣ, ಹುಮ್ನಾಬಾದ್ ತಾಲೂಕಿನವರಲ್ಲಿ ಸೋಂಕು ಕಂಡು ಬಂದಿದ್ದು, ಬಹುತೇಕರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ ಎಂದು ಹೇಳಲಾಗಿದೆ.