ದಾವಣಗೆರೆ: ತಮಿಳುನಾಡಿಗೆ ಪಟಾಕಿ ತರಲು ಹೋಗಿ ಬಂದವನಿಗೆ ಕೊರೋನಾ ಸೋಂಕು ತಗುಲಿದೆ. ಶಿವಕಾಶಿಗೆ ಪಟಾಕಿ ತರಲು ಹೋಗಿದ್ದ ವ್ಯಕ್ತಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ನಿವಾಸಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಶಿವಕಾಶಿಗೆ ಹೋಗಿ ಬಂದ ವ್ಯಕ್ತಿಯಿಂದ 11 ಜನರಿಗೆ ಸೋಂಕು ತಗುಲಿದ್ದು ಇವರಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಹೀಗಾಗಿ ಚನ್ನಗಿರಿ ಪಟ್ಟಣವನ್ನು ಸ್ವಯಂ ಪ್ರೇರಿತವಾಗಿ ಲಾಕ್ಡೌನ್ ಮಾಡಲಾಗಿದೆ. ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು, ಸುಮಾರು 120 ಜನರ ಸ್ಯಾಂಪಲ್ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಚನ್ನಗಿರಿ ಪಟ್ಟಣದಲ್ಲಿ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಿ ಸ್ವಯಂಪ್ರೇರಿತ ಲಾಕ್ ಡೌನ್ ಮಾಡಲಾಗಿದೆ.