
ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 239 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಡಪಟ್ಟಿದೆ. ಜೂನ್ 6 ರಂದು ಸಂಜೆ 5 ಗಂಟೆಯಿಂದ ಜೂನ್ 7 ರ ಸಂಜೆ 5 ಗಂಟೆಯವರೆಗೆ ಕಳೆದ 24 ಗಂಟೆಗಳ ಅವಧಿ 239 ಮಂದಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 5452 ಕ್ಕೆ ಏರಿಕೆಯಾಗಿದೆ.
3257 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಕೊರೋನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದು, ಇದುವರೆಗೆ ರಾಜ್ಯದಲ್ಲಿ 61 ಮುಂದೆ ಸೋಂಕಿನಿಂದ ಮೃತಪಟ್ಟಿದ್ದಾರೆ. 10 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಒಂದೇ ದಿನ 143 ಮಂದಿ ಬಿಡುಗಡೆಯಾಗಿದ್ದು, ಇದುವರೆಗೆ 2132 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇವತ್ತು ಪತ್ತೆಯಾದ ಪ್ರಕರಣಗಳ ಪೈಕಿ 183 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು 9 ಮಂದಿ ಅಂತರರಾಷ್ಟ್ರೀಯ ಪ್ರಯಾಣಿಕರು ಇದ್ದಾರೆ.
