alex Certify ಬೆಂಗಳೂರಿಗೆ ಇಂದೂ ಬಿಗ್ ಶಾಕ್: 800 ಮಂದಿಗೆ ಸೋಂಕು ದೃಢ, 1 ಜಿಲ್ಲೆ ಹೊರತುಪಡಿಸಿ ಉಳಿದೆಡೆ ಕೊರೊನಾ ಅಬ್ಬರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಇಂದೂ ಬಿಗ್ ಶಾಕ್: 800 ಮಂದಿಗೆ ಸೋಂಕು ದೃಢ, 1 ಜಿಲ್ಲೆ ಹೊರತುಪಡಿಸಿ ಉಳಿದೆಡೆ ಕೊರೊನಾ ಅಬ್ಬರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 800 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 11,361 ಕ್ಕೆ ಏರಿಕೆಯಾಗಿದೆ. ಇವತ್ತು 265 ಜನ ಬಿಡುಗಡೆಯಾಗಿದ್ದು, ಇದುವರೆಗೆ 1810 ಜನ ಬಿಡುಗಡೆಯಾಗಿದ್ದಾರೆ. 9395 ಸಕ್ರಿಯ ಪ್ರಕರಣಗಳಿದ್ದು, 155 ಮಂದಿ ಮೃತಪಟ್ಟಿದ್ದಾರೆ.

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 83, ಧಾರವಾಡ 57, ಕಲಬುರ್ಗಿ 51, ಬೀದರ್ 51, ಮೈಸೂರು 49, ಬಳ್ಳಾರಿ 45, ರಾಮನಗರ 37, ಉತ್ತರಕನ್ನಡ 35, ಶಿವಮೊಗ್ಗ 33. ಮಂಡ್ಯ 29. ಉಡುಪಿ 28, ಹಾಸನ 26, ಬಾಗಲಕೋಟೆ 26, ರಾಯಚೂರು 23, ವಿಜಯಪುರ 22, ಬೆಳಗಾವಿ 20, ತುಮಕೂರು 16 ಜನರಿಗೆ ಸೋಂಕು ತಗುಲಿದೆ.

ಕೊಡಗು 14, ಯಾದಗಿರಿ 10, ದಾವಣಗೆರೆ, ಕೋಲಾರ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು ತಲಾ 6, ಕೊಪ್ಪಳ 5, ಗದಗ 4, ಚಿಕ್ಕಬಳ್ಳಾಪುರ 3, ಚಿತ್ರದುರ್ಗ ಜಿಲ್ಲೆಯಲ್ಲಿ ಒಬ್ಬರಿಗೆ ಸೋಂಕು ತಗುಲಿದೆ. ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...