ಬೆಂಗಳೂರು: ಕೊರೋನಾ ಲಸಿಕೆ ವಿತರಣೆಗೆ ರಾಜ್ಯದಲ್ಲಿ 29,500 ಕೇಂದ್ರಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಸೂಚನೆಯಂತೆ ಲಸಿಕೆ ವಿತರಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ. 10 ಸಾವಿರ ಸಿಬ್ಬಂದಿ ನಿಯೋಜನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, 29,451 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಲಸಿಕೆ ನೀಡಲು 10,008 ವ್ಯಾಕ್ಸಿನೇಷನ್ ಸಿಬ್ಬಂದಿಯನ್ನು ಗುರುತಿಸಲಾಗಿದೆ.
ಸರ್ಕಾರಿ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಶೇಕಡ 80 ರಷ್ಟು ಖಾಸಗಿ ಆಸ್ಪತ್ರೆಗಳಿಂದ ಮಾಹಿತಿ ಬಂದಿದ್ದು, ಇನ್ನೂ ಶೇಕಡ 20 ರಷ್ಟು ಖಾಸಗಿ ಆಸ್ಪತ್ರೆಗಳ ಮಾಹಿತಿ ಈ ವಾರದೊಳಗೆ ಬರಬೇಕಿದೆ ಎಂದು ತಿಳಿಸಿದ್ದಾರೆ.