ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮತ್ತಷ್ಟು ಪರಿಣಾಮಕಾರಿ ಕ್ರಮಕೈಗೊಳ್ಳಲು ಕೇಂದ್ರ ಸರ್ಕಾರ ರಾಜ್ಯಕ್ಕೆ ಸೂಚನೆ ನೀಡಿದೆ.
ಕೊರೊನಾ ಪರೀಕ್ಷೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಅಲ್ಲದೇ ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ತಿಳಿಸಲಾಗಿದೆ.
ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಕಾರ್ಯತಂತ್ರ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಆರೋಗ್ಯ ಮೂಲಸೌಕರ್ಯಗಳನ್ನು ಬಲಪಡಿಸಬೇಕು. ಕೋವಿಡ್ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ನಿವೃತ್ತ ವೈದ್ಯರು, ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು, ನರ್ಸಿಂಗ್ ವಿದ್ಯಾರ್ಥಿಗಳನ್ನು ಕೆಲಸಕ್ಕೆ ಬಳಸಿಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಿಲೆಂಡರ್, ಪರೀಕ್ಷಾ ಕಿಟ್ ಗಳು ಔಷಧಿಗಳ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಪರ್ಯಾಯ ಸಂಪನ್ಮೂಲಗಳನ್ನು ಬಳಸಿಕೊಳ್ಳಬೇಕು. ಕೊರೊನಾ ಸೋಂಕಿತರ ಮರಣ ಪ್ರಮಾಣವನ್ನು ತಡೆಯಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.