alex Certify ಪುಂಡರ ಬಗ್ಗು ಬಡಿಯಲು ಮಹತ್ವದ ಹೆಜ್ಜೆ ಇಟ್ಟ ಕೇಂದ್ರ, ರಾಜ್ಯ ಸರ್ಕಾರದಿಂದ ‘ಸುಗ್ರೀವಾಜ್ಞೆ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುಂಡರ ಬಗ್ಗು ಬಡಿಯಲು ಮಹತ್ವದ ಹೆಜ್ಜೆ ಇಟ್ಟ ಕೇಂದ್ರ, ರಾಜ್ಯ ಸರ್ಕಾರದಿಂದ ‘ಸುಗ್ರೀವಾಜ್ಞೆ’

Extend adequate security to health workers, take penal action ...

ಕೋರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡು ಸೇವೆ ಸಲ್ಲಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಸೇವಾನಿರತರ ರಕ್ಷಣೆಗೆ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿವೆ.

ಕೊರೋನಾ ನಿಗ್ರಹಕ್ಕೆ ಜೀವದ ಹಂಗುತೊರೆದು ಹೋರಾಟ ನಡೆಸುತ್ತಿರುವ ವೈದ್ಯರಿಗೆ, ವೈದ್ಯಕೀಯ ಸಿಬ್ಬಂದಿಗೆ ಕಿರುಕುಳ ನೀಡುವುದನ್ನು ಜಾಮೀನು ರಹಿತ ಅಪರಾಧವೆಂದು ಪರಿಗಣಿಸಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ.

ಕೇಂದ್ರ ಹೊಸ ಕಾನೂನಿನ ಅನ್ವಯ ಕಿರುಕುಳ ನೀಡಿದವರಿಗೆ 7ವರ್ಷ ಜೈಲು 5 ಲಕ್ಷ ರೂಪಾಯಿ ದಂಡ ಹಾಕಲಾಗುವುದು. ಹಲ್ಲೆ ದೌರ್ಜನ್ಯ ಎಸಗಿದವರಿಗೆ ಶಿಕ್ಷೆ ನೀಡಲು ಕಾನೂನು ತರಲಾಗಿದೆ.

ಅದೇ ರೀತಿ ರಾಜ್ಯದಲ್ಲಿಯೂ ಸುಗ್ರೀವಾಜ್ಞೆ ಮೂಲಕ ವೈದ್ಯ ಸಿಬ್ಬಂದಿ, ಪೊಲೀಸರು, ಅಧಿಕಾರಿಗಳಿಗೂ ಕಾನೂನು ರಕ್ಷಣೆ ನೀಡಲಾಗಿದ್ದು ಹಲ್ಲೆಕೋರರಿಗೆ 5 ಲಕ್ಷ ರೂಪಾಯಿವರೆಗೆ ದಂಡ, ಆಸ್ತಿ ಹಾನಿ ಮಾಡಿದರೆ ದುಪ್ಪಟ್ಟು ದಂಡ ವಸೂಲಿ ಮಾಡಲಾಗುವುದು. 3 ವರ್ಷವರೆಗೆ ಜೈಲು ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...