alex Certify ಇಂದು ವಿವಾಹವಾಗಬೇಕಿದ್ದ ಮದುಮಗಳಿಗೆ ಕೊರೋನಾ, ಮದುವೆ ಸಿದ್ಧತೆಯಲ್ಲಿದ್ದವರಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ವಿವಾಹವಾಗಬೇಕಿದ್ದ ಮದುಮಗಳಿಗೆ ಕೊರೋನಾ, ಮದುವೆ ಸಿದ್ಧತೆಯಲ್ಲಿದ್ದವರಿಗೆ ಬಿಗ್ ಶಾಕ್

ಬೆಂಗಳೂರು: ಇಂದು ಮದುವೆಯಾಗಬೇಕಿದ್ದ ಯುವತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಮದುವೆಯಾಗಬೇಕಿದ್ದ ಮದುಮಗಳು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ನಿವಾಸಿಯಾಗಿರುವ 24 ವರ್ಷದ ಯುವತಿಗೆ ಇಂದು ಮದುವೆ ನಿಶ್ಚಯವಾಗಿತ್ತು. ಮದುವೆಗೆ ಎಲ್ಲಾ ತಯಾರಿ ನಡೆಸಲಾಗಿದ್ದು, ಯುವತಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯುವತಿಗೆ ಸೋಂಕು ತಗುಲಿರುವುದು ಹೇಗೆ ಎನ್ನುವುದು ಗೊತ್ತಾಗಿಲ್ಲ. ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದು ಶನಿವಾರ ಮಧ್ಯಾಹ್ನ ಕೊರೊನಾ ಸೋಂಕು ತಗುಲಿರುವ ಮಾಹಿತಿ ಗೊತ್ತಾಗಿದೆ. ಇಂದು ನಡೆಯಬೇಕಿದ್ದ ಮದುವೆಯನ್ನು ಮುಂದೂಡಲಾಗಿದೆ. ಯುವತಿ ಹಾಗೂ ಕುಟುಂಬದವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಪರೀಕ್ಷೆ ನಡೆಸಲಾಗಿದೆ. ವರನ ಕಡೆಯವರಿಗೆ ಮದುವೆ ಮುಂದೂಡಲು ಮನವೊಲಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...