ಬೆಂಗಳೂರು: ಕೋವಿಡ್ ಸೋಂಕಿತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೂರವಾಣಿ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಕೋವಿಡ್ ಸೋಂಕು ತಗುಲಿರುವ ಡಿ.ಕೆ. ಶಿವಕುಮಾರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಿಎಂ ಆರೋಗ್ಯ ಕ್ಷೇಮ ವಿಚಾರಿಸಿ, ಆದಷ್ಟು ಬೇಗ ಚೇತರಿಸಿಕೊಂಡು ಮರಳುವಂತೆ ಹಾರೈಸಿದ್ದಾರೆ.
ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ಧರಾಮಯ್ಯ ಸೇರಿ ಹಲವು ನಾಯಕರಿಗೆ ಸೋಂಕು ತಗುಲಿ ಗುಣಮುಖರಾಗಿದ್ದಾರೆ. ಇನ್ನು ಹಲವರು ಕೊರೋನಾ ಪಾಸಿಟಿವ್ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.