alex Certify ಆಸ್ಪತ್ರೆಯಲ್ಲಿದ್ದ ಕೊರೋನಾ ಸೋಂಕಿತೆ, ರಾತ್ರಿ ಪಿಪಿಇ ಕಿಟ್ ಧರಿಸಿ ಬಂದದವನಿಂದ ನೀಚ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಲ್ಲಿದ್ದ ಕೊರೋನಾ ಸೋಂಕಿತೆ, ರಾತ್ರಿ ಪಿಪಿಇ ಕಿಟ್ ಧರಿಸಿ ಬಂದದವನಿಂದ ನೀಚ ಕೃತ್ಯ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾನ ಸೋಂಕಿತೆಗೆ ಪಿಪಿಇ ಕಿಟ್ ಧರಿಸಿದ್ದ ಅಪರಿಚಿತ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

ಜುಲೈ 25 ರಂದು ರಾತ್ರಿ 10 ಗಂಟೆ ವೇಳೆಗೆ ಟ್ರಾಮಾ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತೆ ಬಳಿಗೆ ಬಂದ ವ್ಯಕ್ತಿ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಸೋಂಕಿತ ಮಹಿಳೆ ನೋಡಲ್ ಅಧಿಕಾರಿಗೆ ಈ ಕುರಿತಾಗಿ ಮಾಹಿತಿ ನೀಡಿದ್ದು, ಅವರು ಆಸ್ಪತ್ರೆ ಸಿಬ್ಬಂದಿ ವಿಚಾರಣೆ ನಡೆಸಿದ್ದಾರೆ. ನಂತರದಲ್ಲಿ ವಿಕ್ಟೋರಿಯಾ ಆಸ್ಪತ್ರೆಯ ಮುಖ್ಯಸ್ಥರು ವಿವಿಪುರಂ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದು, ದುಷ್ಕರ್ಮಿ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...