ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 9 ರಿಂದ ಮೇ 31 ರವರೆಗೆ 3221 ಕೊರೋನಾ ಪ್ರಕರಣ ವರದಿಯಾಗಿದ್ದು ಜೂನ್ 12 ರ ವೇಳೆಗೆ 6 ಸಾವಿರ ಗಡಿ ದಾಟಿದೆ.
ಆಗಸ್ಟ್ 15 ರ ವೇಳೆಗೆ ರಾಜ್ಯದಲ್ಲಿ ಕೊರೋನಾ ಭಾರಿ ಪ್ರಮಾಣದಲ್ಲಿ ಸ್ಫೋಟಗೊಳ್ಳುವ ಸಾಧ್ಯತೆ ಇದೆ. ಇದಕ್ಕೆ ತಕ್ಕಂತೆ ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳತೊಡಗಿದೆ. ಚಿಕಿತ್ಸೆಗೆ ಅಗತ್ಯವಾದ ಸೌಲಭ್ಯ, ವೆಂಟಿಲೇಟರ್ ವ್ಯವಸ್ಥೆ ಮಾಡಲಾಗುತ್ತಿದೆ.
ಸೋಂಕಿತರ ಪ್ರಮಾಣ ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಎಲ್ಲಾ ಸೋಂಕಿತರಿಗೆ ಸೂಕ್ತವಾದ ಚಿಕಿತ್ಸೆ ದೊರೆಯುವುದು ಕಷ್ಟಸಾಧ್ಯ ಎನ್ನುವ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಕೊರೋನಾ ಸೋಂಕಿತರಿಗೆ ಆಸ್ಪತ್ರೆ, ಹಾಸಿಗೆಗಳನ್ನು ಮೀಸಲಿಟ್ಟರೆ ಕೊರೋನಾ ಹೊರತಾದ ರೋಗಿಗಳಿಗೂ ಚಿಕಿತ್ಸೆಗೆ ತೊಂದರೆಯಾಗಬಹುದು ಎನ್ನುವ ಆತಂಕ ಎದುರಾಗಿದೆ.