alex Certify ರಾಜ್ಯದಲ್ಲಿ ಕೊರೊನಾ ಇಳಿಮುಖ: ಸೋಂಕಿತರಿಗಿಂತ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ ಅಧಿಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೊರೊನಾ ಇಳಿಮುಖ: ಸೋಂಕಿತರಿಗಿಂತ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ ಅಧಿಕ

ಬೆಂಗಳೂರು: ರಾಜ್ಯದಲ್ಲಿ ಇಂದು 5356 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,93,907 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 51 ಮಂದಿ ಮೃತಪಟ್ಟಿದ್ದು ಇದುವರೆಗೆ 10,821 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು 8749 ಜನ ಬಿಡುಗಡೆಯಾಗಿದ್ದು ಇದುವರೆಗೆ 6,93,584 ಜನ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 89,483 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಕೂಡ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದ್ದು 2688 ಜನರಿಗೆ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 3,21,054 ಕ್ಕೆ ಏರಿಕೆಯಾಗಿದೆ. ಇವತ್ತು 4355 ಮಂದಿ ಬಿಡುಗಡೆಯಾಗಿದ್ದು ಇದುವರೆಗೆ 2,60,602 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು 21 ಮಂದಿ ಮೃತಪಟ್ಟಿದ್ದು ಇದುವರೆಗೆ 3688 ಸಾವನ್ನಪ್ಪಿದ್ದಾರೆ. 56,763 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...