alex Certify ಕೊರೊನಾ ಸೋಂಕಿತನ ಕುಟುಂಬಕ್ಕೆ ಬಹಿಷ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಸೋಂಕಿತನ ಕುಟುಂಬಕ್ಕೆ ಬಹಿಷ್ಕಾರ

ವಿಜಯಪುರ: ಕೊರೊನಾ ಸೋಂಕು ತಗಲಿದ ವ್ಯಕ್ತಿಯ ಕುಟುಂಬಕ್ಕೆ ಸ್ಥಳೀಯರು ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ವಿಜಯಪುರದ ಚಾಲುಕ್ಯ ನಗರದಲ್ಲಿ ಪುಣೆಯಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆತನ ಕುಟುಂಬದ ಜೊತೆ ಯಾರು ಸಂಪರ್ಕ ಇಟ್ಟುಕೊಳ್ಳಬಾರದು. ಅವರ ಮನೆಗೆ ಪೇಪರ್, ತರಕಾರಿ, ಅಗತ್ಯ ವಸ್ತು ಪೂರೈಕೆ ಮಾಡಬಾರದೆಂದು ಕೆಲವು ಸ್ಥಳೀಯರು ತಕರಾರು ತೆಗೆದಿದ್ದಾರೆ. ಮನೆ ಕೆಲಸಗಾರರಿಗೆ ಕೆಲಸಕ್ಕೆ ಬರದಂತೆ ಅಡಚಣೆ ಉಂಟು ಮಾಡಿ ಅಘೋಷಿತ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗಿದೆ.

ಇದರಿಂದಾಗಿ ಕಂಗಾಲಾದ ಕುಟುಂಬದವರು ಪ್ರಧಾನಿ, ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ಟ್ವೀಟ್ ಮಾಡಿ ನೆರವಿಗೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...