alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೊರೊನಾ ಸೋಂಕು ಇಳಿಮುಖ – ಇಂದು ಹೊಸ ಕೇಸ್ ಗಿಂತ ಬಿಡುಗಡೆಯಾದವರ ಸಂಖ್ಯೆ ಅಧಿಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೊರೊನಾ ಸೋಂಕು ಇಳಿಮುಖ – ಇಂದು ಹೊಸ ಕೇಸ್ ಗಿಂತ ಬಿಡುಗಡೆಯಾದವರ ಸಂಖ್ಯೆ ಅಧಿಕ

ಬೆಂಗಳೂರು: ರಾಜ್ಯದಲ್ಲಿ ಇವತ್ತು 5018 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,70,604 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 64 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 10,542 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು ಒಂದೇ ದಿನ 8005 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 6,53,829 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,06,214 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇವತ್ತು 2481 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,10,021 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ ಬೆಂಗಳೂರಿನಲ್ಲಿ 17 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 3542 ಮಂದಿ ಮೃತಪಟ್ಟಿದ್ದಾರೆ. 2363 ಮಂದಿ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 2,41,942 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 64,536 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...